Karnataka Rain: ಪ್ರತಿ ವರ್ಷದಂತೆ ಈ ವರ್ಷವು ಬೆಂಗಳೂರಲ್ಲಿ ಮಳೆಯಾದ್ರೆ ಸಾಕು ಜನರ ಪರದಾಟ ತಪ್ಪಿದ್ದಲ್ಲ.. ಮಳೆಯಿಂದ ನಗರದಲ್ಲಿ ಆಗೋ ಅವಾಂತರಕ್ಕೆ ಮುಕ್ತಿ ಇಲ್ಲ.. ಕಂಡರು ಕಾಣದಂತೆ ಇರೋ ಅಧಿಕಾರಿಗಳು, ಸಚಿವರು. ನಗರದಲ್ಲಿ ಮಳೆಯಿಂದಾಗುವ ಅನಾಹುತಗಳಿಗೆ ಶಾಶ್ವತ ಪರಿಹಾರ ಯಾವಾಗ ಸಿಗುತ್ತೋ ಗೋತ್ತಿಲ್ಲ.. ಆದ್ರೆ ಜನ ಪರದಾಡೋದು ಮಾತ್ರ ತಪ್ಪಿಲ್ಲ..
ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಬೆಂಗಳೂರಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ನಿನ್ನೆ ಸುರಿದ ಮಳೆಗೆ ಈಗಾಗಲೇ ಹಲವು ಅವಾಂತರಗಳಾಗಿವೆ. ಇನ್ನು ವಿಧಾನಸೌಧ, ಕೆ.ಆರ್. ಸರ್ಕಲ್, ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್, ವಿಜಯನಗರ ಯಲಹಂಕ ಹಾಗೂ ಮೂಂತಾದ ಕಡೆಗಳಲ್ಲಿ ಭಾರೀ ಮಳೆಯಾಗ್ತಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರೋದ್ರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಇನ್ನು ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ರಾಜಕಾಲುವೆ ಚೆಂಬರ್ ಕೂಡ ಸಂಪೂರ್ಣ ಜಲಾವೃತಗೊಂಡಿದ್ದು ಕಾರು, ಜೀಪುಗಳು ಕೂಡ ಮುಳುಗಡೆಯಾಗಿವೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ರಾಜ್ಯ ಹವಾಮಾನ ಇಲಾಖೆ ಮುಂದಿನ 4 ದಿನಗಳ ಕಾಲ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಯನ್ನು ನೀಡಲಾಗಿದೆ.
Also Read: Bengaluru Rain Alert: ಒಂದೇ ಮಳೆಗೆ ಮುಳುಗಿಹೋಯ್ತು ‘ಬೆಂದ’ ಕಾಳೂರು! : ಭಾರೀ ಮಳೆಗೆ ಓರ್ವ ಮಹಿಳೆ ಬಲಿ
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮೇ 22ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇನ್ನೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಿನ್ನೆಯಂತೆ ಬೆಂಗಳೂರಲ್ಲಿ ಇಂದೂ ಕೂಡ ಧಾರಾಕಾರ ಮಳೆಯಾಗ್ತಿದೆ.
ಇನ್ನು ಮೇ 22ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
