Karnataka Rain Update: ಬಿರು ಬಿಸಿಲು ಮತ್ತು ಶೆಕೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಸ್ವಲ್ಪ ತಂಪೆರೆದಿದ್ದಾನೆ. ನಿನ್ನೆ, ಮೊನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನೂರಾರು ಮರಗಳು ಮಳೆ ಗಾಳಿಗೆ ಧರೆಗಪ್ಪಳಿಸಿವೆ. ಕೆಲ ಸಾವು ನೋವುಗಳು ವರದಿಯಾಗಿದೆ. ಇದೀಗ ಮತ್ತೆ ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಮುಂದಿನ ಮೂರು ಗಂಟೆಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಈಗಾಗಲೇ ಜನರನ್ನು ಎಚ್ಚರಿಸಿದೆ. ಮತ್ತು ಕೆಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿದೆ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಹೌದು ಮುಂದಿನ ಮೂರು ಗಂಟೆಗಳು ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ, ಯಾದಗಿರಿ ಸೇರಿ ಈ ಭಾಗದ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಲಾಗಿದೆ.
ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜೊತೆಗೆ ಈ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Also Read: IPL ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮದಲ್ಲಿ ಮಹತ್ತರ ಬದಲಾವಣೆ
ಈ ಬಾರಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಹಲವೆಡೆ ಉತ್ತಮ ಮಳೆಯಾಗ್ತಿದೆ. ಬೇಸಿಗೆಯಲ್ಲೂ ಮಳೆರಾಯ ಕೃಪೆ ತೋರಿದ್ದಾನೆ. ಇಳೆಯನ್ನು ತಂಪಾಗಿಸಿದ್ದಾರೆ. ಬೆಂಗಳೂರಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗ್ತಿದೆ. ಇನ್ನೂ ಇಂದು ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
