ಕನ್ನಡದ ಖ್ಯಾತ ನಟರಾದ ದಿವಂಗತ ಡಾ. ವಿಷ್ಣುವರ್ಧನ್ ಹಾಗೂ ಡಾ. ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ಸರಕಾರವು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ಮಹತ್ವದ ನಿರ್ಧಾರವನ್ನ ಕೈಗೊಳ್ಳಲಾಯಿತು. ಕನ್ನಡ ಚಿತ್ರರಂಗದ ಮೇರು ನಟನಾದ ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಹಾಗೂ ಕನ್ನಡದ ಖ್ಯಾತ ನಟಿ ಅಭಿನಯ ಸರಸ್ವತಿ ಬಿ.ಸರೋಜಾದೇವಿಯವರಿಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ಪ್ರಶಸ್ತಿ ಘೋಷಿಸಲಾಯಿತು. ಈ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವನಗರದ ನಿವಾಸಕ್ಕೆ ನಟಿಯರಾದ ಮಾಜಿ ಸಚಿವೆ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

ಇನ್ನು ಈ ಹಿಂದೆಯೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿ ವಿಷ್ಣುವರ್ಧನ್‌ ಹಾಗೂ ಬಿ ಸರೋಜಾದೇವಿಯವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿಯರು ಮನವಿ ಪತ್ರ ಸಲ್ಲಿಸಿದ್ರು.

Read Also : ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ!

Share.
Leave A Reply