ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ದ್ವಿಶತಕ ಬಾರಿಸಿ ಮಿಂಚಿದ್ದಾರೆ.. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿ, ಭಾರತ ತಂಡದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯುವ ಸಂದೇಶ ರವಾನಿಸಿದ್ದಾರೆ..
ಇಂಗ್ಲೆಂಡ್‌ನ ಕ್ಯಾಂಟರ್ಬರಿಯಲ್ಲಿ ನಡೆಯುತ್ತಿರುವ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಪಂದ್ಯದಲ್ಲಿ ಈ ಮಹತ್ವದ ದ್ವಿಶತಕ ಗಳಿಸಿದ್ದಾರೆ. ಇದು ಅವರ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ನಾಲ್ಕನೇ ದ್ವಿಶತಕ ವಾಗಿದೆ. ಆಂಗ್ಲರ ನೆಲದಲ್ಲಿ ಕಳೆದ 14 ತಿಂಗಳಲ್ಲಿ ಅವರು ಬಾರಿಸಿದ 2ನೇ ದ್ವಿಶತಕ ಇದಾಗಿದೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಾರ್ಥಾಂಪ್ಟನ್‌ಶೈರ್ ಪರ ಗ್ಲಾಮೋರ್ಗನ್ ವಿರುದ್ಧ ಅಜೇಯ 202 ರನ್ ಗಳಿಸಿದ್ದರು… ಇದೀಗ ಇಂಗ್ಲೆಂಡ್ ವಿರುದ್ಧ 204 ರನ್ ಗಳಿಸಿ ಕರುಣ್ ನಾಯರ್ ಔಟಾಗಿದ್ದಾರೆ. ಇತ್ತೀಚಿನ ರಣಜಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಿಂದಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿದ್ದು, ಅದ್ಭುತ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಸಿಗುವ ಮುನ್ಸೂಚನೆ ಕೊಟ್ಟಿದ್ದಾರೆ..

