ಚಂದನವನದಲ್ಲಿ ಸ್ಟಾರ್ ವಾರ್ ತಣ್ಣಾಗಾಗುತ್ತಿದ್ದಂತೆ ಈಗ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ಅಭಿಮಾನಿಗಳೊಂದಿಗೆ ‘ಮಾರ್ಕ್’ ವೀಕ್ಷಿಸಲಿದ್ದಾರೆ.
ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿ. 31ರಂದು ಅವರು ಪತ್ನಿ ಪ್ರಿಯಾ, ನಿರ್ದೇಶಕ ವಿಜಯ್ ಕಾರ್ತಿಕೇಯ, ಗಾಯಕ ವಿಜಯ್ ಪ್ರಕಾಶ್ ಹಾಗೂ ಅಭಿಮಾನಿಗಳ ಜೊತೆ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಡಿ. 31ರಂದು ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 10.30ರ ಶೋನ ಸುದೀಪ್ ವೀಕ್ಷಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಿ ಸಂಜೆ 4.30ಕ್ಕೆ ಮೈಸೂರಿನ ಸಂಗಮ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ.
ಸದ್ಯ ಸೂಪರ್ ಹಿಟ್ ಆಗಿ ಮುನ್ನುಗ್ಗುತ್ತಿರುವ ಮಾರ್ಕ್ ಗೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಗೆದ್ದ ಖುಷಿಯಲ್ಲಿ ಸುದೀಪ್ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸುತ್ತಿದ್ದಾರೆ.
