ಬೆಳಗಾವಿ: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodimutt Sri) ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯದ ಬಗ್ಗೆ ಭಯಾನಕ ಭವಿಷ್ಯ ನುಡಿದಿದ್ದಾರೆ.

Independance day banner

ಜಿಲ್ಲೆಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿನ ಸಿಎಂ ಕುರ್ಚಿ ಫೈಟ್ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ಸಕ್ರಾಂತಿ ಕಳೆಯಬೇಕು, ಅರಸನ ಭಂಡಾರ ಬಜೆಟ್‌ ಆಗಬೇಕು. ಸಕ್ರಾಂತಿವರೆಗೂ ಯಾವುದೇ ಬದಲಾವಣೆ ಇಲ್ಲ. ಹಾಲುಮತದವರು ಅವರಾಗಿಯೇ ಕೆಳಗೆ ಇಳಿಯಬೇಕು. ಇಲ್ಲಲವಾದರೆ ಅವರನ್ನು ಇಳಿಸಲು ಆಗುವುದಿಲ್ಲ ಎಂದಿರುವ ಅವರು ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ಸಿಎಂ ಆಗುವುದಿಲ್ಲ ಅಂದಿದ್ದಾರೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರ ಆಗುತ್ತಾರೆ ಎಂಬ ರೀತಿಯಲ್ಲಿ ಭವಿಷ್ಯ ನುಡಿದಿದ್ದಾರೆ.

ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟದ ಕೆಲಸ. ಸ್ವತಃ ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದಿದ್ದಾರೆ.

Share.
Leave A Reply