ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ (Sidlaghatta Municipal Commissioner) ಫ್ಲೆಕ್ಸ್ ವಿಚಾರದಲ್ಲಿ ನಿಂದಿಸಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡಗೆ ಅಮಾನತು ಶಿಕ್ಷೆ ಸಿಕ್ಕಿದೆ.

ರಾಜೀವ್ ಗೌಡರನ್ನು (Rajeev Gowda) ಕೆಪಿಸಿಸಿಯಿಂದ (KPCC) ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೀಡಿರುವ ವರದಿಯಂತೆ ಕೆಪಿಸಿಸಿ ಅಮಾನತು ಮಾಡಿ ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಕೆ ಕರೆ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತನ್ನ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ರಾಜೀವ್ ಗೌಡ ನಾಪತ್ತೆಯಾಗಿದ್ದಾರೆ. ಪೊಲೀಸರು ಅವರಿಗೆ ಹುಡುಕಾಟ ನಡೆಸಿದ್ದಾರೆ.

ಸಚಿವ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದರು. ಆ ಪ್ರಕರಣ ರಾಜ್ಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡಿತ್ತು. ಜನರು ಛೀಮಾರಿ ಹಾಕಿದ್ದರು. ಹೀಗಾಗಿ ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು.

ಘಟನೆಯ ಬಗ್ಗೆ ಕಾರಣ ಕೇಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್ ನೀಡಿದ್ದರು. 7 ದಿನಗಳ ಒಳಗೆ ನೋಟಿಸ್ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ಎಚ್ಚರಿಕೆ ನೀಡಿದರೂ ಉತ್ತರ ನೀಡಿಲ್ಲ ಎನ್ನಲಾಗಿದೆ. ಇದೀಗ ಶಿಸ್ತು ಪಾಲನಾ ಸಮಿತಿ ಸೂಚನೆ ಮೇರೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Share.
Leave A Reply