Site icon BosstvKannada

KRS ಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಇದೇ ಮೊದಲ ಬಾರಿಗೆ ಜೂನ್‌ನಲ್ಲೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ ಭರ್ತಿಯಾದ ಹಿನ್ನಲೆ ಇಂದು ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಮೂಲಕ ಜೂನ್‌ನಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.

ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದ ದೃಶ್ಯ ಕಂಡು ಬಂದಿತ್ತು. ಈ ಕಾರ್ಯಕ್ರಮದಲ್ಲಿ ಸಚಿವರಾದ ಎಚ್. ಸಿ.ಮಹಾದೇವಪ್ಪ, ಕೆ. ವೆಂಕಟೇಶ್, ಎನ್.ಎಸ್. ಬೋಸರಾಜು, ಹಾಗೂ ಸ್ಥಳೀಯ ಶಾಸಕರಾದ ರವಿಕುಮಾರ ಗಣಿಗ ಹಾಗೂ ಇನ್ನಿತರೆ ಗಣ್ಯರು ಪಾಲ್ಗೊಂಡಿದ್ದರು.

Exit mobile version