ಪಾಕಿಸ್ತಾನದಲ್ಲಿ ಮತ್ತೆ ಭಯದ ಭೀತಿ ಆವರಿಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿ ಮೂರು ಸ್ಫೋಟಗಳು ಸಂಭವಿಸಿವೆ. ಲಾಹೋರ್ ವಿಮಾನ ನಿಲ್ದಾಣದ(Lahore Airport) ಬಳಿ ಸಂಭವಿಸಿದ ಸ್ಫೋಟ(Blast)ಗಳ ಶಬ್ಧ ಹಲವಾರು ಕಿಲೋಮೀಟರ್‌ಗಳ ದೂರದಲ್ಲಿ ಕೇಳಿಬಂದಿದೆ ಎನ್ನಲಾಗಿದೆ. ಇದಾದ ನಂತರ, ಸೈರನ್‌ಗಳ ಶಬ್ದವೂ ಕೇಳಿಬಂದಿದೆ.
ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟ(Lahore Airport Blast)ದ ನಂತರ ಸೈರನ್‌ಗಳು ಮೊಳಗಿವೆ. ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣ(Social Media)ದಲ್ಲಿ ಹರಿದಾಡುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Lahore Airport)ವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಲಾಹೋರ್‌ನಲ್ಲಿ ಈ ಸ್ಫೋಟಗಳು ಭಾರತ ಪಾಕಿಸ್ತಾನದಲ್ಲಿ ಆಪರೇಷನ್ ಸಿಂಧೂರ್ (Operation Sindoor)ನಡೆಸಿದ ಒಂದು ದಿನದ ಮೊದಲು ನಡೆದಿದ್ದವು. ಪ್ರಸ್ತುತ, ಲಾಹೋರ್‌ನಲ್ಲಿ ಈ ಸ್ಫೋಟಗಳನ್ನು ಯಾರು ನಡೆಸಿದ್ದಾರೆಂದು ಬಹಿರಂಗಗೊಂಡಿಲ್ಲ. ಮೇ 7 ರ ಮಧ್ಯರಾತ್ರಿ ಭಾರತವು ಆಪರೇಷನ್ ಸಿಂದೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿತು. ಈ ದಾಳಿಯಲ್ಲಿ 70 ಕ್ಕೂ ಹೆಚ್ಚು ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದರು.