ಸರ್ವೋಚ್ಛ ನ್ಯಾಯಾಲಯದ ಇತಿಹಾಸದಲ್ಲೇ ಅಮಾನವೀಯ, ವಿಲಕ್ಷಣ ಘಟನೆಯೊಂದು ನಡೆದಿದೆ. ಸುಪ್ರೀಂಕೋರ್ಟ್‌ನ ಸಿಜೆಐ ಪೀಠದತ್ತ ವಕೀಲರೊಬ್ಬರು ಶೂ ಎಸೆದಿದ್ದಾರೆ.. ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರಿದ್ದ ಪೀಠದತ್ತ ವಕೀಲ ಕಿಶೋರ್ ರಾಕೇಶ್ ಶೂ ಎಸೆದು ದುರ್ವರ್ತನೆ ತೋರಿದ್ದಾರೆ.. ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುವಾಗಲೇ ವಕೀಲ ಕಿಶೋರ್ ರಾಕೇಶ್ ಕೂಗಾಡುತ್ತ ದಾಳಿಗೆ ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಸನಾತನ ಧರ್ಮದ ಅವಮಾನ ಸಹಿಸಲು ಸಾಧ್ಯವಿಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿ ಶೂ ಎಸೆದಿದ್ದಾರೆ.. ಸದ್ಯ ಶೂ ಎಸೆಯಲು ಯತ್ನಿಸಿದ ವಕೀಲನ ಕಿಶೋರ್ ರಾಕೇಶ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಕೈಗೊಂಡಿದ್ದಾರೆ.. ಸದ್ಯ ಈ ವಿಚಾರ ದೇಶಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿದೆ.
Read Also : ಜಾಹ್ನವಿ ಡಿವೋರ್ಸ್ ಕಹಾನಿಗೆ ರೋಚಕ ಟ್ವಿಸ್ಟ್ : ಪತ್ನಿ ವಿರುದ್ಧ ಸಿಡಿದೆದ್ದ ಮಾಜಿ ಪತಿ ಕಾರ್ತಿಕ್!