ರಾಮನಗರ: ವ್ಯಕ್ತಿಯೋರ್ವ ಪ್ರೀತಿಯ ಹೆಸರಿನಲ್ಲಿ ಯುವತಿಗೆ ಮೋಸ ಮಾಡಿದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ (Ramanagar) ವಿಭೂತಿಕೆರೆ ಎಂಬಲ್ಲಿ ನಡೆದಿದೆ. ವರ್ಷಿಣಿ(22) ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಕಾಮುಕನೋರ್ವ ಪ್ರೀತಿ(Love)ಯ ಹೆಸರಿನಲ್ಲಿ ಯುವತಿಯನ್ನು ಲೈಂಗಿಕವಾಗಿ ಬಳಿಸಿಕೊಂಡು ನಂತರ ಮದುವೆಗೆ ನಿರಾಕರಿಸಿದ್ದಾನೆಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಯುವತಿ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಹೆಸರಿನಲ್ಲಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಮದುವೆಗೆ ನಿರಾಕರಿಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ದೇವರದೊಡ್ಡಿ ಗ್ರಾಮದ ಅಭಿ ಎಂಬ ಯುವಕ ಕಾರಣ ಎಂದು ಬರೆದಿದ್ದಾಳೆ. ಅಭಿ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದಾನೆ. ನನ್ನನ್ನು ಬ್ಲಾಕ್‌ಮೇಲ್ ಮಾಡಿ ಪ್ರಗ್ನೆಂಟ್ ಮಾಡಿ ಬಳಿಕ ಗರ್ಭಪಾತ ಮಾಡಿಸಿದ್ದ. ಹಣ ಹಾಗೂ ಚಿನ್ನದ ಉಂಗುರ ಪಡೆದು ವಂಚಿಸಿದ್ದಾನೆ. ಈಗ ಮತ್ತೆ ಕಿರುಕುಳ ನೀಡುತ್ತಿದ್ದಾನೆ. ನನ್ನ ಸಾವಿಗೆ ಆತನೇ ಕಾರಣ. ಆತನನ್ನು ಸುಮ್ಮನೆ ಬಿಡಬೇಡಿ. ನನ್ನ ಹಾಗೆ ಯಾರಿಗೂ ಮೋಸ ಆಗಬಾರದು ಎಂದು ಯುವತಿ ಬರೆದಿದ್ದಾಳೆ ಎಂದು ತಿಳಿದು ಬಂದಿದೆ.

