Site icon BosstvKannada

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಧಾರವಾಡ: ಕುಡಿದ ನಶೆಯಲ್ಲಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.

ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್ ಕೂರಾಡಿ ಕೊಲೆಯಾಗಿರುವ ವ್ಯಕ್ತಿ. ಸಂಬಂಧಿಕರೇ ಕೊಲೆ ಆರೋಪಿಗಳು ಎಂದು ತಿಳಿದು ಬಂದಿದೆ.

ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಕುಡಿತದ ದಾಸನಾಗಿದ್ದ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಹೀಗಾಗಿಪತ್ನಿ ಕಸ್ತೂರಿ ತವರು ಸೇರಿದ್ದಳು. ಕಸ್ತೂರಿ ಮತ್ತು ವಿಟ್ಠಲ್ ದಂಪತಿಗೆ ಮೂವರು ಮಕ್ಕಳೂ ಇದ್ದು, ಮಾವನ ಮನೆಗೆ ಆಗಾಗ ವಿಟ್ಠಲ್ ಬಂದು ಹೋಗುತ್ತಿದ್ದರು. ಅದರಂತೆ ನಿನ್ನೆ ರಾತ್ರಿಯೂ ಮಾವನ ಮನೆಗೆ ಬಂದಿದ್ದರು. ನಂತರ ದೇವಸ್ಥಾನದಲ್ಲಿ ಮಲಗಿದ್ದರು. ಆ ವೇಳೆಯೇ ವಿಠ್ಠಲ್ ಕೊಲೆಯಾಗಿದ್ದಾನೆ.

ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಠಲ್ ಸಹೋದರ ಅಣ್ಣಪ್ಪ ಮತ್ತು ಕಸ್ತೂರಿ ಅವರ ಸಹೋದರ ಪುಂಡಲೀಕ ಕೊಲೆ ಮಾಡಿದ್ದಾರೆಂದು ತಿಳಿದು ಬಂದಿದೆ. ವಿಠ್ಠಲ್ ಕಳ್ಳತನವನ್ನೂ ಮಾಡುತ್ತಿದ್ದ ಎನ್ನಲಾಗಿದೆ. ಸ್ವತಃ ಸಹೋದರನ ಬೈಕ್ ಕದ್ದು ತಂದು ಅದಕ್ಕೆ ಬೆಂಕಿ ಹಚ್ಚಿದ್ದರಂತೆ. ಹೀಗಾಗಿ ಅಣ್ಣಪ್ಪ, ವಿಟ್ಠಲ್ ಮೇಲೆ ಸಿಟ್ಟಾಗಿದ್ದ. ಇನ್ನೊಂದು ಕಡೆ ಕುಡಿದು ಬಂದು ತನ್ನ ಸಹೋದರಿಗೆ ಕಿರುಕುಳ ನೀಡುತ್ತಿದ್ದ ಕಾರಣ ಪುಂಡಲೀಕ ಕೂಡ ಮುನಿಸಿಕೊಂಡಿದ್ದ. ಹೀಗಾಗಿ ಈ ಇಬ್ಬರು ಸೇರಿ ಕೊಲೆಗೆ ಸಂಚು ರೂಪಿಸಿದ್ದರು. ವಿಟ್ಠಲ್ಗೆ ಸರಿಯಾಗಿ ಮದ್ಯ ಕುಡಿಸಿದ್ದ ರಾತ್ರಿ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬುವುದು ತನಿಖೆಯಿಂದ ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Exit mobile version