ಹಾಸನ: ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ (Electric Shock) ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಹಾಸನದ (Hassan) ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಬಿಹಾರ ಮೂಲದ ಬರಿಕುಲ್ (18) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ (17) ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಅಲ್ಲದೇ, ಮತ್ತೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್‌ ತಂತಿ ದುರಸ್ತಿ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಅಲ್ಲಿದ್ದವರು ಪರಾರಿಯಾಗಿದ್ದಾರೆ.

ಗಾಯಗೊಂಡವರನ್ನು ಸ್ತಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply