ಹೈದರಾಬಾದ್: ಪಾಪಿಯೊಬ್ಬ ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಈ ಘಟನೆ ಹೈದರಾಬಾದ್‌ನ (Hyderabad) ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ಅದೇ ಬೆಂಕಿಗೆ ಮಗಳನ್ನು ಸಹ ತಳ್ಳಿ ಪಾಪಿ ಕ್ರೂರತ್ವ ಮೆರೆದಿದ್ದಾನೆ. ಪತ್ನಿ ತ್ರಿವೇಣಿ ಮೇಲೆ ಸಂಶಯ ವ್ಯಕ್ತಪಡಿಸಿ ವೆಂಕಟೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿ, ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಗಳು ತನ್ನ ತಾಯಿಯನ್ನು ಉಳಿಸಲು ಪ್ರಯತ್ನಿಸಿದಾಗ, ಆಕೆಯನ್ನೂ ಬೆಂಕಿಗೆ ತಳ್ಳಿ ಮನೆಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಿರುಚಾಟ ಕೇಳಿ ನೆರೆಹೊರೆಯವರು ಅವರ ಮನೆಗೆ ಧಾವಿಸಿದರು. ಆ ಹೊತ್ತಿಗೆ, ತೀವ್ರವಾದ ಸುಟ್ಟ ಗಾಯಗಳಿಂದ ತ್ರಿವೇಣಿ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ಕೂದಲೆಳೆಯ ಅಂತರದಲ್ಲಿ ಪಾರಾದ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಂಕಟೇಶ್ ಮತ್ತು ತ್ರಿವೇಣಿ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ವೆಂಕಟೇಶ್ ತನ್ನ ಹೆಂಡತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಗಾಗ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Share.
Leave A Reply