ಸಿಲಿಕಾನ್‌ ಸಿಟಿಯ ಮಾಣಿಕ್‌ ಷಾ ಪರೇಡ್‌ನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಲು ತಯಾರಿ ನಡೆಸಲಾಗ್ತಿದೆ. 79ನೇ ಸ್ವಾತಂತ್ರೋತ್ಸವ ಕೌಂಟ್‌ಡೌನ್‌ ಶುರುವಾಗಿದ್ದು, ಮಾಣಿಕ್‌ ಷಾ ಪರೇಡ್‌ ಮೈದಾನ ಸಜ್ಜಾಗಿದೆ. ನಾಳೆಯ ಸ್ವಾತಂತ್ರ್ಯ ದಿನಾಚರಣೆಗಾಗಿ ಭರ್ಜರಿ ಸಿದ್ಧತೆ ನಡೆದಿದೆ.

ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ನಾಳೆ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ವಾತಂತ್ರೋತ್ಸವದ ಪ್ರಮುಖ ಆಕರ್ಷಣೆಯಾದ ಪರೇಡ್‌ನ ಅಂತಿಮ ಹಂತದ ರಿಹರ್ಸಲ್ ನಡೆಯುತ್ತಿದ್ದು, ನಿನ್ನೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವ‌ರ್ ರಾವ್ ಹಾಗೂ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಪರೇಡ್‌ ರಿಹರ್ಸಲ್‌ನಲ್ಲಿ ಭಾಗಿಯಾಗಿ ಸಿದ್ಧತೆಗಳನ್ನ ಪರಿಶೀಲಿಸಿದರು.

ಇನ್ನು ಈ ಬಾರಿ ಸ್ವಾತಂತ್ರೋತ್ಸವ ಪರೇಡ್‌ನಲ್ಲಿ ಒಟ್ಟು 30 ತುಕಡಿಗಳಿಂದ ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಲಿದ್ದು, ಗೋವಾ ಪೊಲೀಸರ ವಿಶೇಷ ತಂಡ ಕೂಡ ಪರೇಡ್‌ನಲ್ಲಿ ಭಾಗಿಯಾಗಲಿದೆ. KSRP,BSF,CAR, ಟ್ರಾಫಿಕ್ ಪೊಲೀಸ್, ಡಾಗ್ ಸ್ಕ್ಯಾಡ್, ಪೊಲೀಸ್‌ ಬ್ಯಾಂಡ್ ಸೇರಿದಂತೆ ವಿವಿಧ ತಂಡಗಳು ಗೌರವ ರಕ್ಷೆ ಸ್ವೀಕರಿಸಲಿದ್ದು, ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಗಳನ್ನ ನಡೆಸಿಕೊಡಲಿದ್ದಾರೆ.

ಇನ್ನು ಭದ್ರತಾ ದೃಷ್ಟಿಯಿಂದ ಮೈದಾನದ ಸುತ್ತ 100 ಸಿಸಿಟಿವಿ ಅಳವಡಿಸಲಾಗಿದ್ದು, 2 ಬ್ಯಾಗೇಜ್ ಸ್ಕ್ಯಾನರ್‌ಗಳನ್ನ ಅಳವಡಿಸಲಾಗಿದೆ. ಅಲ್ಲದೇ ಕಾರ್ಯಕ್ರಮಕ್ಕೆ ಬರುವವರಿಗೆ ಕಾರ್ಯಕ್ರಮ ನಡೆಯುವ ಜಾಗದಲ್ಲಿ ಮೊಬೈಲ್‌ ಬಳಕೆಯನ್ನ ಕೂಡ ನಿಷೇಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇನ್ನು ಈ ಬಾರಿ ಸ್ವಾತಂತ್ರೋತ್ಸವದ ಪರೇಡ್ ವೀಕ್ಷಣೆಗೆ 3 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಆನ್‌ಲೈನ್ ಪೋರ್ಟಲ್ ಸೇವಾ ಸಿಂಧೂವಿನಲ್ಲಿ ಉಚಿತ ಪಾಸ್ ಅಷ್ಟೆ ಮಾಡಿ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ.

Share.
Leave A Reply