ಮಣಿಪುರದಲ್ಲಿ ಹಿಂಸಾಚಾರ (Manipur Violence) ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ತಿಳಿದುಬಂದಿದೆ.
ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ .
ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ.
ಇನ್ನು ಇಂಫಾಲ ಪಶ್ಚಿಮ, ಇಂಫಾಲ ಪೂರ್ವ, ತೌಬಲ್ , ಬಿಷ್ಣುಪುರ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
