ಮಣಿಪುರದಲ್ಲಿ ಹಿಂಸಾಚಾರ (Manipur Violence) ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ತಿಳಿದುಬಂದಿದೆ.

ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ .

ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ.

ಇನ್ನು ಇಂಫಾಲ ಪಶ್ಚಿಮ, ಇಂಫಾಲ ಪೂರ್ವ, ತೌಬಲ್ , ಬಿಷ್ಣುಪುರ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share.
Leave A Reply