ರಾಯಚೂರು: ಮಂತ್ರಾಲಯದ (Mantaralaya) ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಗುರುಗಳು ಕೋಟ್ಯಾಧೀಶರಾಗಿದ್ದಾರೆ.

ಇತ್ತೀಚೆಗೆ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಹೋದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಕಳೆದ 20 ದಿನಗಳಲ್ಲಿ ಮಂತ್ರಾಲಯದಲ್ಲಿ 3.73 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಡಿಸೆಂಬರ್ ತಿಂಗಳಲ್ಲಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ (Guru Raghavendra Swamy Mutt) ಲಕ್ಷಾಂತರ ಭಕ್ತರು ಭೇಟಿ ನೀಡಿದ್ದರು.

ಹೀಗಾಗಿ 20 ದಿನಗಳಲ್ಲಿ 3,73,66,587 ರೂ. ಕಾಣಿಕೆ ಸಂಗ್ರಹವಾಗಿದೆ. ಈ ಪೈಕಿ ಸಂಗ್ರಹವಾದ ಕಾಣಿಕೆಯಲ್ಲಿ 3,62,69,247 ರೂ. ಕರೆನ್ಸಿ ನೋಟುಗಳು ಹಾಗೂ 10,97,340 ರೂ. ನಾಣ್ಯಗಳು ಸಂಗ್ರಹವಾಗಿವೆ. ಅಲ್ಲದೇ, 87 ಗ್ರಾಂ ಚಿನ್ನ, 910 ಗ್ರಾಂ ಬೆಳ್ಳಿ ಕೂಡ ಕಾಣಿಕೆ ರೂಪದಲ್ಲಿ ಬಂದಿವೆ.

Share.
Leave A Reply