ವಿಲ್ಸನ್ ಗಾರ್ಡನ್​ ಬಳಿ ಭೀಕರ ಸಿಲಿಂಡರ್​ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂರು ಮನೆಗಳು ಛಿದ್ರ, ಛಿದ್ರವಾಗಿದೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಬೆಳ್ಳಂ ಬೆಳಗ್ಗೆ ಸಂಭವಿಸಿದ ಸಿಲಿಂಡರ್​ ಸ್ಫೋಟದ ಸದ್ದಿಗೆ ವಿಲ್ಸನ್ ಗಾರ್ಡನ್ ಜನರು ಬೆಚ್ಚಿಬಿದ್ದಿದ್ದಾರೆ. ಮೂರು ಮನೆಗಳ ಮೇಲಿನ ಶೀಟ್​ಗಳು ಹಾರಿದ್ದು, ಗೋಡೆಗಳು ಛಿದ್ರ, ಛಿದ್ರವಾಗಿದೆ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗ್ತಿದೆ.

ಸಿಲಿಂಡ‌ರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ ಘಟನೆ ನಗರದ ಆಡುಗೋಡಿಯಲ್ಲಿ ನಡೆದಿದೆ. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭಿರವಾಗಿದೆ. ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Share.
Leave A Reply