ಬೆಂಗಳೂರು: ಹೊಸ ವರ್ಷಾಚರಣೆಗೆ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ಮಹಾರಾಷ್ಟ್ರ ಎಎನ್‌ಟಿಎಫ್‌ನಿಂದ ಬೆಂಗಳೂರಲ್ಲಿ ಡ್ರಗ್ಸ್ (Bengaluru Drugs) ಫ್ಯಾಕ್ಟರಿ ಸೀಜ್ ಮಾಡಲಾಗಿದೆ. ಬರೋಬ್ಬರಿ 55.88 ಕೋಟಿ ರೂ. ಮೌಲ್ಯದ ಎಂಡಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಎಎನ್‌ಟಿಎಫ್-ಮಹಾರಾಷ್ಟ್ರ ಮಾದಕ ವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿತ್ತು. ಕೋಟಿ, ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
1.5 ಕೋಟಿ ರೂ. ಮೌಲ್ಯದ ಡ್ರಗ್ಸ ಸೀಜ್ ಆಗಿತ್ತು. ಅಲ್ಲಿ ಅಬ್ದುಲ್ಲ ಖಾದರ್ ಶೇಕ್ ಬಂಧಿತ ಆರೋಪಿ. ವಿಚಾರಣೆ ನಂತರ ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಬಂಧಿಸಲಾಗಿತ್ತು. ಪಾಟೀಲ್ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ದಾಳಿ ನಡೆದಿತ್ತು. ಇಲ್ಲಿ ರಾಜಸ್ಥಾನದ ಸೂರಜ್ ರಮೇಶ್ ಯಾದವ್ ಮತ್ತು ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಅರೆಸ್ಟ್ ಆಗಿದ್ದಾರೆ.
ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ. ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ಗುರುತಿಸಲಾಗಿದೆ. ದಾಳಿ ಸಂದರ್ಭದಲ್ಲಿ 4.1 ಕೆಜಿ ಘನ ಎಂಡಿ ಮತ್ತು 17 ಕೆಜಿ ದ್ರವ ಎಂಡಿ ಸೇರಿದಂತೆ ಒಟ್ಟು 21.4 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

