ಬೆಂಗಳೂರು: ವೈದ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ರೋಗಿಯೊಬ್ಬರು ಸಾವು-ಬದುಕಿನ ಮಧ್ಯೆ ಒದ್ದಾಡುತ್ತಿರುವ ಘಟನೆಯೊಂದು ನಡೆದಿದೆ.
ಸಿಲಿಕಾನ್ ಸಿಟಿಯ (Bengaluru news) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲೇ ಈ ಘಟನೆ ನಡೆದಿದೆ. ರಕ್ತಹೀನತೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದರು. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದರು. ಬಂದಿದ್ದರು.. ಸಿಬ್ಬಂದಿ ತಪ್ಪು ರಕ್ತ (wrong blood transfusion) ನೀಡಿದ್ದರಿಂದಾಗಿ ರೋಗಿಯ ಆರೋಗ್ಯ ತೀವ್ರ ಹದಗೆಟ್ಟಿದೆ. ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅದೃಷ್ಟವಶಾತ್ ವ್ಯಕ್ತಿಯ ಆರೋಗ್ಯ ಸುಧಾರಿಸುತ್ತಿದೆ ಎನ್ನಲಾಗಿದೆ. ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುನೀತ್ ಸೂರ್ಯ ಓ ಪಾಸಿಟಿವ್ (O+) ರಕ್ತದ ಗುಂಪಿನವರು. ಆದರೆ, ಲ್ಯಾಬ್ ಟೆಕ್ನಿಷಿಯನ್ ನಿರ್ಲಕ್ಷ್ಯದಿಂದಾಗಿ ತಪ್ಪಾಗಿ ಎ ಪಾಸಿಟಿವ್ (A+) ರಕ್ತ ನೀಡಲಾಗಿದ್ದು, ಪುನೀತ್ ಸ್ಥಿತಿ ಗಂಭೀರವಾಗಿದೆ. ಎಡವಟ್ಟಿಗೆ ಕಾರಣವಾದ ಲ್ಯಾಬ್ ಟೆಕ್ನಿಷಿಯನ್ ಉಮೇಶ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಘಟನೆ ಖಂಡಿಸಿ ಆಸ್ಪತ್ರೆ ಸಿಬ್ಬಂದಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ರೋಗಿಯ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.