ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕೊನೆಗೂ ಗ್ರೀನ್‌ಸಿಗ್ನಲ್‌ಸಿಕ್ಕಿದೆ(Minister Lad). ಮಂಡಳಿ ರಚನೆ ಕುರಿತ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆಯ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬರುವಲ್ಲಿ ಕಾರ್ಮಿಕ ಸಚಿವ ಸಂತೋಷ್‌ಲಾಡ್ ಅವರ ಶ್ರಮ ಬಹಳಷ್ಟಿದೆ.
ಛಲ ಬಿಡದೆ Minister Lad ಅವರು ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಿದ್ದು ಬಹಳಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಮಂಡಳಿ ರಚನೆ ಸಂಬಂಧ ಲಾಡ್‌ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಯಲ್ಲಿ ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಇದೀಗ ರಾಜ್ಯಪಾಲರು ಸಹಿಯೊಂದಿಗೆ ಲಾಡ್ ಅವರ ಪ್ರಯತ್ನಕ್ಕೆ ಫಲ ಸಿಕ್ಕಂತೆ ಆಗಿದೆ.. ಈಗ ಅವರೆಲ್ಲರ ಕಲ್ಯಾಣಕ್ಕೆ ಹಾಗೂ ಸಾಮಾಜಿಕ ಸೇವಾ ಯೋಜನೆಗೆ ರೂಪಿಸಲು ಪ್ರತ್ಯೇಕ ಮಂಡಳಿ ರಚನೆಯಾದರೆ ಅನುಕೂಲವಾಗಲಿದೆ.
ಈ ಹಿನ್ನೆಲೆಯಲ್ಲಿ, ಕಾರ್ಮಿಕ Minister Santosh Lad ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು.
Also Read: Ramayana ಸಿನಿಮಾದ ಫಸ್ಟ್ ಆಕ್ಷನ್ ಲುಕ್ ರಿಲೀಸ್..!
ಇನ್ನು ಗಿಗ್ ಕಾರ್ಮಿಕರಿಗೆ ಅಪಘಾತ ಪರಿಹಾರ, ಶೈಕ್ಷಣಿಕ ಸಹಾಯಧನ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಈ ಮಂಡಳಿಯ ಮೂಲಕ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಅಗ್ರಿಗೇಟರ್ ಸಂಸ್ಥೆಗಳು ವಹಿವಾಟಿನಿಂದ ಪಡೆದ ಆದಾಯದಿಂದ ಮಂಡಳಿಯಲ್ಲಿ ನಿಧಿ ಸ್ಥಾಪಿಸಿ ಅದನ್ನು ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ.
ರಾಜ್ಯಪಾಲರ ಭೇಟಿ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್ ವಿ ಪ್ರಸಾದ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲ ಕೃಷ್ಣ, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

