ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ. ಈ ವಸತಿ ಸಮುಚ್ಚಯಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್.ಎಸ್.ಲಾಡ್ ಅವರು ಲೋಕಾರ್ಪಣೆಗೊಳಿಸಿ, ಕಾರ್ಮಿಕರ ಬಳಕೆಗೆ ಅನುಕೂಲ ಮಾಡಿಕೊಟ್ಟರು.





ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದ ಅವಲಂಬಿತರು ಉಳಿದುಕೊಳ್ಳಲು ಈ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ. ಇನ್ನು ಈ ವೇಳೆ ಶಾಸಕರಾದ ಚನ್ನಬಸಪ್ಪ, ಶಾರದಾ ಪೂರ್ಯನಾಯಕ್, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಡಾ.ಧನಂಜಯ ಸರ್ಜಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
