ಹುಬ್ಬಳ್ಳಿ: ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ಅಪ್ರಾಪ್ತ ಬಾಲಕ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಈ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ 16 ವರ್ಷದ ಅರುಣಗೌಡ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಅರುಣಗೌಡ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಪಾಲಕರು, ಮೊಬೈಲ್ (mobile)​ ಬಿಟ್ಟು ಓದಿನ ಕಡೆ ಗಮನಹರಿಸು ಎಂದು ಬುದ್ಧಿವಾದ ಹೇಳಿದ್ದಾರೆ. ಇದಕ್ಕೆ ಮನನೊಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ ಎನ್ನಲಾಗಿದೆ. ಕೂಡಲೇ ಪಾಲಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Leave A Reply