ಬೆಳಗಾವಿ: ರಾಜ್ಯ ಸರ್ಕಾರವು ಅಧಿಕಾರಕ್ಕೂ ಮುನ್ನ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಏರಿದ ನಂತರ ಅವುಗಳನ್ನು ಜಾರಿ ಮಾಡಿದೆ. ಈ ಪೈಕಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ (gruhalakshmi scheme) ಕೂಡ ಒಂದಾಗಿದೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಯಜಮಾನಿಗೆ ಹಣ ಸಂದಾಯವಾಗಿಲ್ಲ. ಈ ಕುರಿತು ಶಾಸಕರ ಸದನದಲ್ಲಿ ಗಮನ ಸೆಳೆದಿದ್ದಾರೆ.
ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ತಪ್ಪು ಲೆಕ್ಕಾ ಕೊಟ್ಟಿದ್ದಾರೆ ಎನ್ನುವ ಆರೋಪ ಕೂಡ ಮಾಡಲಾಗಿದೆ. ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೂ ನೀಡಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ ವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಹೇಶ್ ಟೆಂಗಿನಕಾಯಿ ಸದನದಲ್ಲಿಂದು ಸರ್ಕಾರದ ಅಧಿಕೃತ ದಾಖಲೆ ಬಿಡುಗಡೆ ಮಾಡಿದ್ದು, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಡುಗಡೆ ಮಾಡಿಲ್ಲದಿರುವುದು ದಾಖಲೆ ಮೂಲಕ ಬಹಿರಂಗ ಪಡಿಸಿದ್ದಾರೆ. ಹಾಗಾದರೆ ಯೋಜನೆಯಲ್ಲಿ ಸ್ಕ್ಯಾಮ್ ಆಗಿದೆಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಸದನದಲ್ಲಿ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹೇಶ್ ಟೆಂಗಿನಕಾಯಿ, ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಆಗಸ್ಟ್ 2025ರ ವರೆಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗಿದೆ. ಸದನಕ್ಕೆ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ . ಸದನದ ಹಕ್ಕು ಮತ್ತು ಗೌರವ ತೋರಿದ ಅಗೌರವ. ಈ ವಿಚಾರವಾಗಿ ತುರ್ತಾಗಿ ಸದನದಲ್ಲಿ ಮಾತನಾಡಲು ಅವಕಾಶ ಕೋಡಿ ಮನವಿ ಮಾಡಿದ್ದಾರೆ.
ಡಿ. 9ರಂದು ಸದನದದಲ್ಲಿ ಗೃಹ ಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಪ್ರಶ್ನೆ ಮಾಡಿದ್ದೆ. 2025ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಕೊಟ್ಟಿಲ್ಲ ಅಂತಾ ಕೇಳಿದ್ದೆ. ಇದಕ್ಕೆ ಸಚಿವರು ಆಗಸ್ಟ್ ತಿಂಗಳವರೆಗೂ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಗದಗ, ಹಾವೇರಿ ಸೇರಿ ಮೂರು ಜಿಲ್ಲೆಗಳ ಬಗ್ಗೆ ದಾಖಲೆ ನೀಡಿದ್ದೇವೆ. ಫೆಬ್ರವರಿ, ಮಾರ್ಚ್ ತಿಂಗಳ ‘ಗೃಹಲಕ್ಷ್ಮೀ’ ಹಣ ಬಿಡುಗಡೆ ಮಾಡಿಲ್ಲ. ಹಾಗಾದರೆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.
