Site icon BosstvKannada

ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ : ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಅಲರ್ಟ್‌ ಘೋಷಣೆ!

ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿದ್ದಾನೆ.. ಆಗಸ್ಟ್ 7ರ ವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ ಮೊದಲ ವಾರದಿಂದಲೇ ಮುಂಗಾರು ಚುರುಕುಗೊಳ್ಳಲಿದೆ. ಆಗಸ್ಟ್‌ 4 ರಿಂದ ಆಗಸ್ಟ್‌ 10ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಜಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಆಗಸ್ಟ್‌ 4 ಮತ್ತು 5 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಯೆಲ್ಲೋ, ಆರೆಂಜ್ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯನಗರ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರಿನಲ್ಲಿ ಕೂಡ ಭಾನುವಾರ ರಾತ್ರಿಯಿಂದಲೇ ಜೋರು ಮಳೆ ಶುರುವಾಗಿದ್ದು, ಈಗ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Exit mobile version