Site icon BosstvKannada

ಜೋಳದ ಚಿಗುರು ಸೇವಿಸಿ 50ಕ್ಕೂ ಅಧಿಕ ಕುರಿ ಸಾವು

ತುಮಕೂರು: ಜೋಳದ ಚಿಗುರು ಸೇವಿಸಿದ ಪರಿಣಾಮ 50ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಂಪಕ್ಕ ಎಂಬುವವರಿಗೆ ಸೇರಿದ್ದ 50ಕ್ಕೂ ಅಧಿಕ ಕುರಿಗಳು ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಸಾವನ್ನಪ್ಪಿವೆ.

ಎಂದಿನಂತೆ ಕುರಿಗಳನ್ನು ಮೇಯಲು ಹೋಗಲಾಗಿತ್ತು. ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು ಬೀಳತೊಡಗಿದ್ದು, ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದನ್ನು ಕಂಡ ಕುರಿಗಾಹಿ ಕಂಗಾಲಾಗಿದ್ದಾರೆ. ಲಕ್ಷಾಂತರ ರೂ. ನಷ್ಟವಾಗಿದೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆಯನ್ನು ಸೇವಿಸಿರುವುದು ಪತ್ತೆಯಾಗಿದೆ. ವೈದ್ಯಾಧಿಕಾರಿ ಅರ್ಕೆರಪ್ಪ ಅವರು, ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳು ಸಾವನ್ನಪ್ಪಿವೆ ಎಂದು ಹೇಳಿದ್ದಾರೆ. ಮತ್ತೆ ಈ ರೀತಿ ತಪ್ಪು ಮಾಡದಂತೆ ಕುರಿಗಾಹಿಗಳಿಗೆ ಹಾಗೂ ರೈತರಿಗೆ ಪಶು ವೈದ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Exit mobile version