ಹುಬ್ಬಳ್ಳಿ: ನಗರದ ಮರಾಠಗಲ್ಲಿಯಲ್ಲಿರುವ ಮೆಟ್ರೋ ಮಾಲ್‌ನಲ್ಲಿ(Metro Mall) ಬೆಂಕಿ ಕಾಣಿಸಿಕೊಂಡಿದ್ದು, 60ಕ್ಕೂ ಅಧಿಕ ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಗುರುವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಕೆಲಸ ಮುಗಿಸಿ, ಮಾಲ್‌ಗೆ ಬೀಗ ಹಾಕಿ ಹೋಗಿದ್ದ ಸಂದರ್ಭದಲ್ಲಿ ನಾಲ್ಕನೇ ಫ್ಲೋರ್‌ನಲ್ಲಿರುವ ಲೈಫ್ ಸ್ಟೈಲ್ ಶಾಪ್‌ನಲ್ಲಿ ಮೊದಲಿಗೆ ಸಣ್ಣದಾಗಿ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಇಡೀ ಮಾಲ್‌ಗೆ ಬೆಂಕಿ ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಹುಬ್ಬಳ್ಳಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
