ಚಿಕ್ಕಬಳ್ಳಾಪುರ: ಚೇಳೂರು ಪಟ್ಟಣದಲ್ಲಿ ನಡೆದಿದ್ದ 40 ದಿನಗಳ ನವಜಾತ ಗಂಡು ಶಿಶು ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅಜ್ಜಿಯೇ ಮ ತಿರುವು ಸಿಕ್ಕಿದ್ದು, ಮಗು ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಗುವಿನ ತಾಯಿ ದೂರು ನೀಡಿದ್ದಾರೆ.
ಅನ್ಯಕೋಮಿನ ಅಜ್ಜಿ, ಮೊಮ್ಮಗಳ ನವಜಾತ ಶಿಶು ಕೊಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾದ ದಂಪತಿಗೆ ಜನಸಿದ್ದ ಗಂಡು ಮಗು ಡಿ. 21 ರಂದು ಸಾವನ್ನಪ್ಪಿತ್ತು. ಮಗು ಸಾವನ್ನಪ್ಪಿದ್ದಾಗ ಅಜ್ಜಿಯ ಹತ್ತಿರ ಇತ್ತು. ಪೊಲೀಸ್ ಠಾಣೆಗೆ ದೂರು ನೀಡುವ ವಿಚಾರದಲ್ಲಿ ಅಜ್ಜಿ ತಕರಾರು ತೆಗೆದಿದ್ದಳು ಎನ್ನಲಾಗಿದೆ. ಹೀಗಾಗಿ ತಾಯಿ ದೂರು ಸಲ್ಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ನವಜಾತ ಶಿಶುವಿನ ಮೃತದೇಹವನ್ನು ಹೊರತೆಗೆಯಲಾಗಿದ್ದು, ಚೇಳೂರು ತಹಸೀಲ್ದಾರ್ ಶ್ವೇತಾ ಅವರ ನೇತೃತ್ವದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಲಾಗಿದೆ.
ತಾಯಿ ಅಪ್ರಾಪ್ತೆ ಎನ್ನಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹಿಂದೂ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ನವಜಾತ ಶಿಶುವಿನ ಮರಣಕ್ಕೆ ನಿಖರ ಕಾರಣ ಏನು? ಇದರಲ್ಲಿ ಅಜ್ಜಿಯ ಪಾತ್ರವಿದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
