ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮೇಲೆ ಖುದ್ದು ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರೇ ಸ್ಫೋಟಕ ಆರೋಪ ಮಾಡಿದ್ದರು. Chaitra Kundapur ಮೇ 9ರಂದು ಶ್ರೀಕಾಂತ್ ಕಶ್ಯಪ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಸದ್ಯ ಸಾಲು ಸಾಲು ಆರೋಪಗಳು ಕೇಳಿ ಬಂದಿದೆ. ಅಷ್ಟಕ್ಕೂ ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರೇ, ಗಂಭೀರ ಆರೋಪ ಮಾಡಿದ್ದಾರೆ.
ವಿಪರ್ಯಾಸ ಅಂತಂದರೆ ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು ಆರೋಪವನ್ನು ಮಾಡಿದ್ದಾರೆ. “ನನ್ನ ಮಗಳು ದೊಡ್ಡ ಕಳ್ಳಿ. ನನ್ನನ್ನು ಮದುವೆಗೆ ಆಹ್ವಾನಿಸಿಲ್ಲ” ಎಂದು ಆರೋಪಿಸಿದ್ದಾರೆ.
ಮಾಧ್ಯಮಗಳೊಟ್ಟಿಗೆ ಮದುವೆಗೆ ಯಾಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಉತ್ತರಿಸಿದ್ದಾರೆ. “ಕಳ್ಳರು ಕಳ್ಳರು ಮದುವೆಯಾಗಿದ್ದಾರೆ. ಆಕೆ ನನ್ನನ್ನು ಕರೆದಿಲ್ಲ ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ.
Also Read: Trump ಡಬಲ್‌ಗೇಮ್.. ಭಾರತ ವಿರುದ್ಧ ಷಡ್ಯಂತ್ರ!
ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ” ಎಂದು ಬಾಲಕೃಷ್ಣ ನಾಯ್ಕ್, ಮಗಳು ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.

