ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2025ರ ಉದ್ಘಾಟನೆಯು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನಡೆಯಿತು. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಲವು ವಿವಾದಗಳ ನಡುವೆಯೂ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಮಾಡಿದರು. ಜೊತೆಗೆ ಸಿಎಂ ಸಿದ್ದರಾಮಯ್ಯ, ಮೈಸೂರು ಉಸ್ತುವಾರಿ ಸಚಿವ ಹೆಚ್‌.ಸಿ. ಮಹದೇವಪ್ಪ, ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ, ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ ಸೇರಿದಂತೆ ಹಲವು ರಾಜಕೀಯ ನಾಯಕರು, ಗಣ್ಯರು ಉಪಸ್ಥಿತರಿದ್ದರು.

ದಸರಾ ಉದ್ಘಾಟನೆಗೂ ಮೊದಲು ಬಾನು ಮುಷ್ತಾಕ್​ ಚಾಮುಂಡಿ ತಾಯಿಯ ಪೂಜೆಯಲ್ಲಿ ಭಾಗಿಯಾಗಿದ್ದರು. ಚಾಮುಂಡೇಶ್ವರಿ ದೇವಿಯ ಮಂಗಳಾರತಿ ಸ್ವೀಕರಿಸಿ, ಭಾವುಕರಾದರು. ಕೇಸರಿ ಹಾಗೂ ಹಸಿರು ಬಣ್ಣದ ಸೀರೆಯುಟ್ಟು ದೇವಸ್ಥಾನಕ್ಕೆ ಆಗಮಿಸಿದ್ದ ಬಾನು ಮುಷ್ತಾಕ್ ಬಿಜೆಪಿ ನಾಯಕರು ಸೇರಿದಂತೆ ಹಲವು ಸಂಘಟನೆಗಳ ವಿರೋಧದ ನಡುವೆಯೂ ತಮ್ಮ ಗೌರವವನ್ನು ಕಾಪಾಡಿಕೊಂಡು ದಸರಾ ಉದ್ಘಾಟನೆ ಮಾಡಿದರು. ಈ ಸನ್ನಿವೇಶ ಸಾಮಾಜಿಕ ಸಾಮರಸ್ಯ ಮತ್ತು ಭಾವೈಕ್ಯತೆ ಸಂದೇಶವನ್ನು ಸಮಾಜಕ್ಕೆ ಸಾರುತ್ತದೆ ಅಂತ ಹಲವರು ಸಂತಸ ವ್ಯಕ್ತಪಡಿಸ್ತಿದ್ದಾರೆ..

Share.
Leave A Reply