Mysore Sandal Soap ಬ್ರಾಂಡ್‌ ಅಂಬಾಸಿಡರ್‌ ಆಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನ ನೇಮಕ ಮಾಡಲಾಗಿದೆ. ಇದಕ್ಕೆ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಹಾಗೂ ಕನ್ನಡಪರ ಹೋರಾಟಗಾರರಿಂದ ವಿರೋಧ ವ್ಯಕ್ತವಾಗಿದೆ.

ಈಗಾಗಲೇ ಅನೇಕ ಬ್ಯೂಟಿ ಬ್ರ್ಯಾಂಡ್​ಗಳು ತಮನ್ನಾ ಭಾಟಿಯಾ ಜೊತೆ ಒಪ್ಪಂದ ಮಾಡಿಕೊಂಡಿವೆ. ಈಗ Mysore Sandal Soap ಕೂಡ ಈ ನಟಿಯ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಎರಡು ವರ್ಷಗಳ ಕಾಲ ತಮನ್ನಾ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ ಇರಲಿದೆ. ಇದಕ್ಕಾಗಿ ನಟಿಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರಕ್ಕೀಗ ಕರವೇ ಅಧ್ಯಕ್ಷರಾದ ನಾರಾಯಣ ಗೌಡರು ವಿರೋಧ ವ್ಯಕ್ತಪಡಿಸಿ, ತಮ್ಮ ಎಕ್ಸ್‌ ಖಾತೆಯ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Also Read: Mysore Sandal Soap ರಾಯಭಾರಿಯಾಗಿ ತಮನ್ನಾ ನೇಮಕ

ಕನ್ನಡದ ನಟಿ ದೀಪಿಕಾ ಪಡುಕೋಣೆ ಅವರು ಕರ್ನಾಟಕದಿಂದ ಬಾಲಿವುಡ್​ಗೆ ಹೋದವರು. ಕನ್ನಡದಲ್ಲೇ ಈ ರೀತಿಯ ಸಾಕಷ್ಟು ನಟಿಯರು ಇದ್ದಾರೆ. ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು. ಆದ್ರೆ ಹಾಗೇ ಮಾಡದೇನೆ ಕನ್ನಡದ ಗಂಧ ಗಾಳಿಯೂ ಗೊತ್ತಿರದ ತಮನ್ನಾ ಭಾಟಿಯಾರನ್ನ ಆಯ್ಕೆ ಮಾಡಿಕೊಂಡಿದ್ದರಿಂದ ಕರವೇ ನಾರಾಯಣ ಗೌಡರು ವಿರೋಧ ವ್ಯಕ್ತಪಡಿಸಿ, ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರಿಯಾಗಿ ತಮನ್ನಾರನ್ನ ನೇಮಿಸಿದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅವರನ್ನ ರಾಯಭಾರಿ ಸ್ಥಾನದಿಂದ ಕೆಳಗಿಳಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲೂ ಇದಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

Share.
Leave A Reply