ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ (KSDL) ಉತ್ಪನ್ನಗಳಿಗೆ ನೂತನ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ (Tamanna Bhatia) ಅವರನ್ನು ಆಯ್ಕೆ ಮಾಡಲಾಗಿದೆ. ಆದ್ರೆ, ತಮ್ಮನ್ನಾ ಆಯ್ಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕದ ಯಾರಾದ್ರು ಸ್ಟಾರ್ ನಟಿಗೆ ಅವಕಾಶ ನೀಡಬಹುದಿತ್ತು ಎಂದು ಹೇಳುತ್ತಿದ್ದಾರೆ. ಆದ್ರೆ, ಈ ಕುರಿತು ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಸ್ಪಷ್ಟನೆ ನೀಡಿದ್ದಾರೆ.
KSDLಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ರಾಯಭಾರಿ ವಿಚಾರವಾಗಿ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಎಂಬಿ ಪಾಟೀಲ್, ಕನ್ನಡ ಚಲನಚಿತ್ರೊದ್ಯಮದ ಬಗ್ಗೆ ನಮಗೆ ಅಪಾರ ಗೌರವವಿದೆ. ಕನ್ನಡ ಸಿನಿಮಾ ಬಾಲಿವುಡ್ ಸಿನಿಮಾಗೂ ಪೈಪೋಟಿ ನೀಡ್ತಿದೆ. KSDL ಕರ್ನಾಟಕದ ಹೊರಗಿನ ಮಾರುಕಟ್ಟೆ ಭೇದಿಸುವ ಉದ್ದೇಶ ಹೊಂದಿದೆ ಹಾಗಾಗಿ ಬೇರೆ ಬಾಷೆ ನಟಿಗೆ ಅವಕಾಶ ನೀಡಲಾಗಿದೆ. ಮಾರುಕಟ್ಟೆ ಎಕ್ಸ್‌ಪರ್ಟ್‌ಗಳ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ಪಿಎಸ್‌ಯು ಮಂಡಳಿಯ ನಿರ್ಧಾರದಂತೆ ಆಯ್ಕೆ ಮಾಡಿದ್ದೇವೆ ಎಂದಿದ್ದಾರೆ.

ಕೆಎಸ್ಡಿಎಲ್ ಕಳೆದ ಸಾಲಿನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇ 18ರಷ್ಟಿದೆ. ಉಳಿದದ್ದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ. ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ಈಗ ದಾಪುಗಾಲು ಹಾಕುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ ನೋಡಿದೆವು. ಆದರೆ ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಪಾಲೋಯರ್ಸ್ ಹೊಂದಿ, ಉಳಿದವರಿಗಿಂತ ಮುಂದಿದ್ದಾರೆ. ಜತೆಗೆ ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ. ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ.
Also Read: ಮತ್ತೆ ಕನ್ನಡಿಗರನ್ನ ಕೆಣಕಿದ್ರಾ Sonu Nigam? ವೈರಲ್ ಟ್ವೀಟ್‌ನಲ್ಲೇನಿದೆ?

ಇದು ಕೆಎಸ್ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೆ ಎಂದು ಅವರು ವಿವರಿಸಿದ್ದಾರೆ. ಇಷ್ಟಕ್ಕೂ ಒಂದು ಸರ್ಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
