ಇತ್ತೀಚಿಗಷ್ಟೇ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್‌ ಧನ್ಕರ್‌ ರಾಜೀನಾಮೆ ನೀಡಿದ್ರು. ಧನ್ಕರ್‌ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಮರುಚುನಾವಣೆಗೆ ಆಡಳಿತ ಪಕ್ಷ ಹಾಗೂ ವಿಪಕ್ಷಗಳಿಂದ ಭಾರೀ ಕಸರತ್ತು ನಡೀತಾಯಿದೆ.

ಇಂದು ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಧಾನಿ ಮೋದಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ರಾಧಾಕೃಷ್ಣನ್ ಅವರು ಪ್ರಧಾನಿ ಹಾಗೂ ಎನ್‌ಡಿಎ ನಾಯಕರೊಂದಿಗೆ ಆಗಮಿಸಿ, ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರಿಗೆ ನಾಲ್ಕು ಸೆಟ್ ಗಳ ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು.

ರಾಧಾಕೃಷ್ಣನ್ ಸುಮಾರು 20 ಪ್ರತಿಪಾದಕರು ಮತ್ತು 20 ಬೆಂಬಲಿಗರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಸಿ.ಪಿ. ರಾಧಾಕೃಷ್ಣನ್ ಅವರೊಂದಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಧರ್ಮೇಂದ್ರ ಪ್ರಧಾನ್, ರಾಮ ಮೋಹನ್ ನಾಯ್ಡು ಕಿಂಜರಪು, ಎಲ್. ಮುರುಗನ್ ಮತ್ತು ಬಿಜೆಪಿ ನಾಯಕ ವಿನೋದ್ ತವಾಡೆ ಇದ್ದರು.

Read Also : PM Narendra Modi : ಮೋದಿ ಉತ್ತರಾಧಿಕಾರಿ ಯಾರು..? ಗಡ್ಕರಿ, ಯೋಗಿಗೆ ಬಿಗ್‌ ಶಾಕ್..?‌

Share.
Leave A Reply