Site icon BosstvKannada

ಹುಲಿಗೆಮ್ಮೆ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಪ್ಫಳ: ಪ್ರಸಿದ್ಧ ಹುಲಿಗೆಮ್ಮ (Huligemma Temple) ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.

ದೇವಸ್ಥಾನದ ಆವರಣದಲ್ಲಿ ಶಿಶು ಬಿಸಾಡಿ ಹೋಗಲಾಗಿದೆ. ಶಿಶುವಿನ ದೇಹ ಹುಳುಗಳಿಂದ ತುಂಬಿತ್ತು. ಮಗು ಅಳುವ ಶಬ್ಧ ಕೇಳಿ ಭಕ್ತರು ಗಮನಿಸಿ ಹೋಂ ಗಾರ್ಡ್ ಸಿಬ್ಬಂದಿಗೆ ಹೇಳಿದ್ದಾರೆ. ಶಿಶುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಹುಲಿಗೆಮ್ಮೆ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುತ್ತಾರೆ. ಜಾತ್ರೆ ಸಮಯದಲ್ಲಿ ಲಕ್ಷಾಂತರ ಜನ ಸೇರುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ನವಜಾತ ಶಿಶು ಬಿಸಾಡಿ ಹೋಗಿದ್ದು, ದೊಡ್ಡ ಆಘಾತಕ್ಕೆ ಕಾರಣವಾಗಿದೆ.

ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೈದ್ಯರು ಹೇಳಿದಂತೆ, ಶಿಶುವು ತಡರಾತ್ರಿ ಜನಿಸಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಸಕಾಲಿಕ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದೆ.

Exit mobile version