ಇಂದು ನಡೆದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್(CSR) ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ.

Independance day banner

ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿ.ಎಸ್.ಆರ್ ಹಣ ಕ್ರೂಢೀ ಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಖುಷ್ಬೂ ಜಿ. ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರ ಸೂಚಿಸಿದ ಕಡೆಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್ ಆರ್ ಹಣದಲ್ಲಿ ನಿರ್ಮಿಸಿ ಕೊಡಬೇಕಾ ಗಿದೆ.

Also Read: ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ : ಡಿಸಿಎಂ ಡಿ.ಕೆ ಶಿವಕುಮಾರ್ ಅಸಮಾಧಾನ

ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಕನಸಿನ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

Share.
Leave A Reply