Site icon BosstvKannada

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ : ಡಿ.ಕೆ. ಶಿವಕುಮಾರ್‌

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು.

ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Exit mobile version