Site icon BosstvKannada

ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಮೆಂಟ್: ಕಿಡಿಗೇಡಿಗಳ ಪತ್ತೆ ತಂಡ ರಚನೆ

ಬೆಂಗಳೂರು: ಕಿಚ್ಚ ಯುದ್ಧಕ್ಕೆ ಸಿದ್ಧ ಎನ್ನುತ್ತಿದ್ದಂತೆ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಶುರುವಾಗಿತ್ತು. ಸುದೀಪ್ ಫ್ಯಾನ್ಸ್ ಹಾಗೂ ದರ್ಶನ್ ಫ್ಯಾನ್ಸ್ ಮಧ್ಯೆ ವಾರ್ ಶುರುವಾಗಿತ್ತು. ಈ ವೇಳೆ ವಿಜಯಲಕ್ಷ್ಮೀ ವಿರುದ್ಧ ಕೆಲವು ಕಿಡಿಗೇಡಿಗಳು ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆಂದು ಸಿಸಿಬಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ.

ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಬುಧವಾರ ವಿಜಯಲಕ್ಷ್ಮೀ ದೂರು ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳು ಭಯಬಿದ್ದು, ಸಾಮಾಜಿಕ ಜಾಲತಾಣಗಳಲ್ಲಿನ ತಮ್ಮ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಹಲವು ಡಿಲಿಟ್ ಮಾಡಿದ್ದಾರೆ ಎನ್ನಲಾಗಿದೆ.

ವಿಜಯಲಕ್ಷ್ಮಿ ಹಾಗೂ ಅವರ ಕುಟುಂಬದ ಸದಸ್ಯರನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ 150ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಹಾಕಿರುವುದು ಕಂಡು ಬಂದಿದೆ. ಕೆಲ ಖಾತೆಗಳಲ್ಲಿದ್ದ ಪೋಸ್ಟ್‌ಗಳು ಡಿಲೀಟ್‌ ಆಗಿವೆ. ವಿಜಯಲಕ್ಷ್ಮಿ ಅವರ ದೂರು ಆಧರಿಸಿ ಯೋಗಿ ಕಿಚ್ಚ, ಮಿ.ಅನಾಥ, ಮಹಿ ಕಿಚ್ಚ, ವಿರಾಟ್‌ ಕಿಚ್ಚ ಎಂಬ ಖಾತೆ ಸೇರಿದಂತೆ 18 ಇನ್‌ಸ್ಟಾಗ್ರಾಮ್‌ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಂತಹ ಖಾತೆಗಳನ್ನು ಪತ್ತೆ ಹಚ್ಚಲು ಈಗ ಪೊಲೀಸರು ಮುಂದಾಗಿದ್ದಾರೆ.

Exit mobile version