ಮಾಜಿ ಸಂಸದೆ ಹಾಗೂ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಕಳಿಸಿದ್ದ ಪುಂಡರ ಬೇಟೆ ಶುರುವಾಗಿದೆ.. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್‌ ಮಾಡಿ ಧಮ್ಕಿ ಹಾಕಿದ್ದ ಇಬ್ಬರಿಗೆ ಸೈಬರ್‌ ಕ್ರೈಂ ಪೊಲೀಸರು ಖೆಡ್ಡಾ ತೋಡಿದ್ದಾರೆ.. ಇತ್ತೀಚೆಗೆ ರಮ್ಯಾ ಚಿತ್ರದುರ್ಗದ ರೇಣುಕಾಸ್ವಾಮಿ ಪರ ಮಾತನಾಡಿದ್ದರು.

ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ ಅಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಷಿಯಲ್ ಮೀಡಿಯಾ ಪೋಸ್ಟ್​ಗಳ ಕಮೆಂಟ್ ಬಾಕ್ಸ್​​ನಲ್ಲಿ ಅಶ್ಲೀಲ ಕಮೆಂಟ್​ ಹಾಗೂ ಮೆಸೇಜ್ ಮಾಡಿದ್ದರು. ಇದ್ರಿಂದ ಆಕ್ರೋಶಗೊಂಡಿದ್ದ ನಟಿ ರಮ್ಯಾ, ಸಾಮಾಜಿಕ ಜಾಲತಾಣದ 43 ಖಾತೆಗಳ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿದ್ರು.

ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.. ರಮ್ಯಾಗೆ ಮೆಸೇಜ್‌ ಬಂದಿದ್ದ ಖಾತೆಗಳ ಐಪಿ ಅಡ್ರೆಸ್‌ ಜಾಲಾಡಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ.

Share.
Leave A Reply