ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಿ ಸೆಪ್ಟಂಬರ್ 22 ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಮಂತ್ರಿಸಿದರು. ಇನ್ನು ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ.

ಈ ಸಂದರ್ಭದಲ್ಲಿ ದಸರಾ ವಿಶೇಷಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read Also : ದಸರಾ ಉದ್ಘಾಟನೆ : ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಅಧಿಕೃತ ಆಹ್ವಾನ

Share.
Leave A Reply