ಬೆಳಗಾವಿ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರು ಡಿ. 18ರಂದು ರಾತ್ರಿ ಅಪಘಾತವಾಗಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರು ಕೂಡ ಪಲ್ಟಿಯಾಗಿದೆ. ಚಾಲಕ ಹಾಗೂ ಪಿಎಸ್ ರಾಜೇಂದ್ರ ಪ್ರಸಾದ್ ಅವರು ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಮೃತ ಯುವಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆಯ ನೌಕರರಾಗಿದ್ದರು ಎನ್ನಲಾಗಿದೆ. ರಾಜೇಂದ್ರ ಪ್ರಸಾದ್ ಅವರು ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ಹೋಗಿ ಮರಳಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share.
Leave A Reply