Site icon BosstvKannada

Operation Sindoor 2.0 : ಭಾರತೀಯ ಸೇನಾ ದಾಳಿಗೆ ತತ್ತರಿಸಿದ ʼಪಾಕ್‌ʼ

Operation Sindoor 2.0 ಪಾಕಿಸ್ತಾನದ ಕಳ್ಳ ಆಟಕ್ಕೆ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ಭಾರತೀಯ ಸೇನೆ ದಾಳಿಗೆ ಪಾಕಿಸ್ತಾನ ತತ್ತರಿಸಿದ್ದರೆ, ಅತ್ತ ಬಲೂಚ್ ಲಿಬರೇಷನ್ ಆರ್ಮಿ ಕೂಡ ಪಾಕಿಸ್ತಾನದ ಕೆಲವು ನಗರಗಳ ಮೇಲೆ ದಾಳಿ ನಡೆಸಿದೆ. ಆಯಕಟ್ಟಿನ ಪ್ರದೇಶವೊಂದರ ಗ್ಯಾಸ್ ಪೈಪ್​ಲೈನ್ ಸ್ಫೋಟಿಸಿದ್ದು, ಪಾಪಿಗಳ ವಿನಾಶಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ.

ಭಾರತೀಯ ಸೇನಾಪಡೆಗಳ ಪ್ರತಿ ದಾಳಿಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನ ಆಂತರಿಕ ಬಿಕ್ಕಟ್ಟಿನಿಂದಲೂ ಇಕ್ಕಟ್ಟಿಗೆ ಸಿಲುಕಿದೆ. ಆಪರೇಷನ್ ಸಿಂದೂರ್ ನಂತರ ಭಾರತವು ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದ್ದರೆ, ಪಾಕಿಸ್ತಾನದೊಳಗಿನ ಬಲೂಚಿಸ್ತಾನದಲ್ಲಿರುವ ಬಂಡುಕೋರ ಸಂಘಟನೆ ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನಿ ಸೇನೆಯ ನೆಲೆಗಳ ಮೇಲೆ ಪ್ರಮುಖ ದಾಳಿ ನಡೆಸಿದೆ. ಅಲ್ಲದೆ, ಆಯಕಟ್ಟಿನ ಮಹತ್ವದ ಗ್ಯಾಸ್ ಪೈಪ್‌ಲೈನ್ ಅನ್ನು ಸಹ ಸ್ಫೋಟಿಸಿದೆ.

ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಕೀಚ್, ಮಸ್ತುಂಗ್ ಮತ್ತು ಕಚಿ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಮತ್ತು ಅದರ ಮಿತ್ರಪಕ್ಷಗಳ ಮೇಲೆ ಆರು ಪ್ರತ್ಯೇಕ ದಾಳಿಗಳನ್ನು ನಡೆಸಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ. ಈ ದಾಳಿಗಳಲ್ಲಿ ರಿಮೋಟ್ ಕಂಟ್ರೋಲ್ಡ್ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆ. ಜಮ್ರಾನ್ ಪ್ರದೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನಿ ಸೇನಾ ಸೈನಿಕನೊಬ್ಬ ಸಾವನ್ನಪ್ಪಿದ್ದಾನೆ. ಹಲವಾರು ಸೇನಾ ನೆಲೆಗಳ ಮೇಲೆ ನಡೆದ ಸಶಸ್ತ್ರ ದಾಳಿಯಲ್ಲಿ ಪಾಕಿಸ್ತಾನ ಸೇನೆಯು ಜೀವ ಮತ್ತು ಆಸ್ತಿಪಾಸ್ತಿ ನಷ್ಟ ಅನುಭವಿಸಿದೆ ಎಂದು ಬಿಎಲ್​ಎ ಹೇಳಿದೆ.

Also Read: Pakistan Prime Minister Shehbaz Sharif : ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್‌ಗೆ ಪುಕಪುಕ!

ಇನ್ನು ಆಪರೇಷನ್ ಸಿಂಧೂರ್‌ನಿಂದಾಗಿ ಪಾಕಿಸ್ತಾನದ ಆಡಳಿತವು ಈಗಾಗಲೇ ಒತ್ತಡದಲ್ಲಿದೆ. ಭಾರತ ನಡೆಸಿದ ಪ್ರತೀಕಾರದ ದಾಳಿಯ ಪರಿಣಾಮ ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ಕ್ಷಿಪಣಿ ಉಡಾವಣಾ ತಾಣಗಳು ಭಾರಿ ಹಾನಿಗೊಳಗಾಗಿವೆ. ಈಗ ಬಲೂಚಿಸ್ತಾನದಲ್ಲಿ ನಡೆದ ಬಿಎಲ್‌ಎ ದಾಳಿಯು ಪಾಕಿಸ್ತಾನ ಸರ್ಕಾರ ಆಂತರಿಕ ದೌರ್ಬಲ್ಯ ಯಾವ ಮಟ್ಟಕ್ಕೆ ಇದೆ ಎನ್ನವುದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ. ಇದರಿಂದ ಪಾಪಿ ಪಾಕಿಸ್ತಾನ ಸಧ್ಯ ವಿಲವಿಲ ಅಂತ ವಿಲವಿಲ ಅಂತ ಒದ್ದಾಡುತ್ತಿದ್ದು,ಪಾಪಿಗಳ ನಾಶ ಶೀಘ್ರದಲ್ಲೇ ಆಗೋದು ಪಕ್ಕಾ ಎಂದು ತಜ್ಞರು ಹೇಳಿದ್ದಾರೆ.

Exit mobile version