Site icon BosstvKannada

ಬಂಡೆಯಂತೆ ನಮ್ಮ ಸರ್ಕಾರ 5 ವರ್ಷ ಭದ್ರ : ಡಿಕೆಶಿ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯ

ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕೆಆರ್​ಎಸ್​ ಡ್ಯಾಂಗೆ ಬಾಗಿನ ಅರ್ಪಿಸುವುದಕ್ಕೂ ಮುನ್ನ ಮೈಸೂರು ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ ಎಂದರು. ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆ ಶಿವಕುಮಾರ್ ಕೈಹಿಡಿದೆತ್ತಿ ಒಗ್ಗಟ್ಟು ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಅಂತಾ ಸಿಎಂ ವಿರುದ್ಧ ಶ್ರೀರಾಮುಲು ಹೇಳಿಕೆ ನೀಡಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಶ್ರೀರಾಮುಲು ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ’ ಎಂದರು.

Exit mobile version