ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಎಸ್.ಎಲ್.ಭೈರಪ್ಪನವರು ಬಳಲುತ್ತಿದ್ರು. ಮರೆವಿನ ಕಾಯಿಲೆಯಿಂದ ಹೆಚ್ಚಾಗಿ ನರಳುತ್ತಿದ್ದ ಭೈರಪ್ಪ, ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಮೈಸೂರು ಬಿಟ್ಟು ಬೆಂಗಳೂರಿಗೆ ಬಂದು ಆಪ್ತರೊಬ್ಬರ ಮನೆಯಲ್ಲಿದ್ದು ಟ್ರೀಟ್ಮೆಂಟ್ ಪಡೆಯುತ್ತಿದ್ರು. ಆದ್ರೀಗ ಮೂರು ತಿಂಗಳ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

1931 ಆಗಸ್ಟ್ 20 ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದ್ರು. ಎಸ್.ಎಲ್. ಭೈರಪ್ಪನವರು ಲಿಂಗಣ್ಣಯ್ಯ ಮತ್ತು ಗೌರಮ್ಮ ದಂಪತಿ ಪುತ್ರರಾಗಿದ್ದ ಭೈರಪ್ಪನವರು, ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನ ಸುತ್ತಮುತ್ತಲಿನ ಶಾಲೆಗಳಲ್ಲಿ ಮುಗಿಸಿದರು. ನಂತರ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿದ್ದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಮುಗಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಸಹ ಪಡೆದಿದ್ದರು.
ಸಾಹಿತ್ಯ ಲೋಕದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದ ಅವರು, ಯುವ ಓದುಗರನ್ನು ಸೂಜಿಗಲ್ಲಿನಂತೆ ಸೆಳೆದಿದ್ದರು. ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿ ಓದುಗರ ಮನ ಗೆದ್ದಿದ್ದಾರೆ. ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಹಾಗೂ ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ರು. 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಸಂದಿವೆ. ಭೈರಪ್ಪನವರ ಕಾದಂಬರಿಗಳು ಜನಪ್ರಿಯವಾಗಿದ್ದು, ಹಲವು ಬಾರಿ ಮರುಮುದ್ರಣಗೊಂಡಿವೆ. ಅವರ ಕೃತಿಗಳು ಮರಾಠಿ, ಇಂಗ್ಲಿಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದವಾಗಿವೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾದಲ್ಲೂ ಮೂಡಿ ಬಂದಿವೆ. ಸಾಹಿತಿ ಭೈರಪ್ಪನವರು ಈ ಹಿಂದೆ ವಿಶ್ವವಿಖ್ಯಾತ ದಸರಾ ಮಹೋತ್ಸವ ಉದ್ಘಾಟನೆ ಮಾಡಿದ್ದರು. 2019ರಲ್ಲಿ ಸರ್ಕಾರದ ಆಯ್ಕೆಗೆ ಮೇರೆಗೆ ಭೈರಪ್ಪನವರು ದಸರಾ ಉದ್ಘಾಟಿಸಿ ಗಮನ ಸೆಳೆದಿದ್ರು.