Pakistan Ceasefire Violation: ನವದೆಹಲಿ: ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ದಿ ತೋರಿಸಿದೆ. ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಮೂರೇ ಗಂಟೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ ಮಾಡಿ ಜಮ್ಮು, ಶ್ರೀನಗರದ ಮೇಲೆ ಡ್ರೋನ್ ದಾಳಿ ನಡೆಸಿದೆ. ಕದನ ವಿರಾಮ ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯಾಗಿದೆ ಎಂದು ವರದಿಯಾಗಿದೆ.
ಭಾರತ-ಪಾಕಿಸ್ತಾನದ ನಡುವೆ ಕಳೆದ 5 ದಿನಗಳಿಂದ ಯುದ್ಧದ ಭೀತಿ ಎದುರಾಗಿದ್ದು, ಇಂದು ಸಂಜೆ ವೇಳೆಗೆ ಕದನ ವಿರಾಮ ಘೋಷಣೆ ಆಗಿರುವುದಾಗಿ ಭಾರತ ಸ್ಪಷ್ಟಪಡಿಸಿತ್ತು. ಈ ನಡುವೆ ಕದನ ವಿರಾಮ ಘೋಷಣೆಯಾದ ಮೂರೇ ಗಂಟೆಯಲ್ಲಿ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನದ ಡ್ರೋನ್‌ಗಳು ದಾಳಗೆ ಮುಂದಾಗಿರುವುದಾಗಿ ವರದಿಯಾಗಿದೆ. ಪಠಾಣ್‌ಕೋಟ್ ಸೇರಿ ಹಲವೆಡೆ ಬ್ಲಾಕ್‌ಔಟ್ ಮಾಡಲಾಗಿದೆ. ಪಿಒಕೆಯ ವಿವಿಧ ಪ್ರದೇಶಗಳು ಸೇರಿದಂತೆ ಹಲವೆಡೆ ಡ್ರೋನ್ ದಾಳಿಗೆ ಮುಂದಾಗಿದೆ. ಹಾಗೂ ಶ್ರೀನಗರ, ಪಠಾಣ್‌ಕೋಟ್, ಫಿರೋಜ್‌ಪುರದಲ್ಲೂ ಬ್ಲ್ಯಾಕ್ ಔಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲೂ ಫಿರಂಗಿ ಶೆಲ್ ದಾಳಿ ವರದಿಯಾಗಿದೆ.
Also Read: AC Side Effects : ಎಸಿ ಹಾಕ್ಕೊಂಡು ಮಲಗ್ತೀರಾ? ಹಾಗಾದ್ರೆ ನಿಮಗೆ ಈ ತೊಂದರೆ ತಪ್ಪಿದ್ದಲ್ಲ!
ಇನ್ನು ಶ್ರೀನಗರದಲ್ಲಿ ಸ್ಫೋಟಗಳ ಸದ್ದು ಕೇಳಿಬರುತ್ತಿದೆ ಅಂತಾ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

