ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹಲವೆಡೆ ಸಂಚಾರ ಹಾಗೂ ಪಾರ್ಕಿಂಗ್ ನಿರ್ಬಂಧ ಹೇರಲಾಗಿದೆ.
ಹೊಸ ವರ್ಷಾಚರಣೆಗೆ ಈಗಾಗಲೇ ಗೃಹ ಇಲಾಖೆ ಗೈಡ್ ಲೈನ್ಸ್ ಕೊಟ್ಟಿದೆ. ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿ. 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ ಹೇರಲಾಗಿದ್ದು, ಪಾರ್ಕಿಂಗ್ ನಿಷೇಧ ಹೇರಲಾಗಿದೆ.
ಡಿಸೆಂಬರ್ 31ರ ರಾತ್ರಿ 8 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿ 02 ಗಂಟೆಯವರೆಗೆ ಈ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.
ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ
ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ವರೆಗೆ
ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ
ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ ವೃತ್ತ) ವರೆಗೆ
ರೆಸ್ಟ್ ಹೌಸ್ ರಸ್ತೆ: ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ
ರೆಸಿಡೆನ್ಸಿ ಕ್ರಾಸ್ ರಸ್ತೆ: ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ ರಸ್ತೆ ಜಂಕ್ಷನ್‌ವರೆಗೆ (ಶಂಕರ್ ನಾಗ್ ಚಿತ್ರಮಂದಿರದವರೆಗೆ)
ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಡಿಸೆಂಬರ್ 31ರ ರಾತ್ರಿ 08 ಗಂಟೆಯ ನಂತರ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.
ಕ್ವೀನ್ಸ್ ವೃತ್ತದಿಂದ ಹಲಸೂರು ಕಡೆಗೆ ಹೋಗುವ ವಾಹನಗಳು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ – ಬಿ.ಆರ್.ವಿ ಜಂಕ್ಷನ್ – ಕಬ್ಬನ್ ರಸ್ತೆ ಮೂಲಕ ವೆಬ್ಸ್ ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಬಹುದು
ಹಲಸೂರಿನಿಂದ ಕಂಟೋನ್ಮೆಂಟ್ ಕಡೆಗೆ ಹೋಗುವ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದು ಹಲಸೂರು ರಸ್ತೆ – ಡಿಕನ್ಸನ್ ರಸ್ತೆ ಮೂಲಕ ಕಬ್ಬನ್ ರಸ್ತೆ ಸೇರಬೇಕು
ಕಾಮರಾಜ್ ರಸ್ತೆ: ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ ವಾಹನ ನಿಲುಗಡೆಗೆ ಅವಕಾಶ
ಈಜಿಪುರ ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲ ತಿರುವು ಪಡೆದು ಎ.ಎಸ್.ಸಿ ಸೆಂಟರ್‌ನಲ್ಲಿ ಎಡ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬೇಕು
ಹೆಚ್.ಎ.ಎಲ್ ಕಡೆಯಿಂದ ಬರುವ ವಾಹನಗಳು ಎ.ಎಸ್.ಸಿ ಸೆಂಟರ್‌ನಲ್ಲಿ ಬಲ ತಿರುವು ಪಡೆದು ಟ್ರಿನಿಟಿ ಮೂಲಕ ಸಾಗಬಹುದು.
ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ ರಸ್ತೆ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ಕಡೆಗೆ ಮಾತ್ರ ಕಾಲ್ನಡಿಗೆಯಲ್ಲಿ ಸಾಗಬೇಕು; ವಿರುದ್ಧ ದಿಕ್ಕಿನಲ್ಲಿ ಸಂಚರಿಸಲು ಅವಕಾಶವಿಲ್ಲ
ಪಾರ್ಕಿಂಗ್ಗೆ ನಿರ್ಬಂಧ ಇರುವ ಸ್ಥಳ
ಡಿಸೆಂಬರ್ 31ರ ಸಂಜೆ 04.00 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 03.00 ಗಂಟೆಯವರೆಗೆ ಹಲವೆಡೆ ಪಾರ್ಕಿಂಗ್ ವ್ಯವಸ್ಥೆ ಇಲ್ಲ
ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ
ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಲ್ಡ್ ಪಿ.ಎಸ್ ಜಂಕ್ಷನ್ ವರೆಗೆ
ಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಸೆಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್ ವರೆಗೆ
ರೆಸ್ಟ್ ಹೌಸ್ ರಸ್ತೆ: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ
ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆ ಜಂಕ್ಷನ್‌ನಿಂದ ಎಸ್.ಬಿ.ಐ ವೃತ್ತದವರೆಗೆ
ರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ

