ಉಡುಪಿ: ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜ್ಯಕ್ಕೆ ಬಂದಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ (Sri Krishna Mutt) ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಮಾರೋಪ ಸಮಾರಂಭಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರ ನೇತೃತ್ವದಲ್ಲಿ ಗೀತೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಗೀತೋತ್ಸವ ಕಾರ್ಯಕ್ರಮವು ಕಳೆದ ತಿಂಗಳಿನಿಂದ ನಡೆಯುತ್ತಿದ್ದು, ಪೇಜಾವರ ಶ್ರೀ ಉದ್ಘಾಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಇಡೀ ಉಡುಪಿ ಕೇಸರಿಮಯವಾಗಿತ್ತು. ಈಗ ಇದೇ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದಾರೆ.
ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಅವರು ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಆನಂತರ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಉಡುಪಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

