ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣ ಬೇಧಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅಪರಾಧ ಸಾಬೀತು ಪಡಿಸಿದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಿಸಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಜನ ಅಧಿಕಾರಿಗಳಿಗೆ ಬಹುಮಾನ ಘೋಷಿಸಲಾಗಿದೆ.
ಇದರೊಂದಿಗೆ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಇನ್ನಿತರ ಅಧಿಕಾರಿಗಳಿಗೂ ಬಹುಮಾನ ಘೋಷಿಸಲಾಗಿದೆ. ಒಟ್ಟಾರೆ 35 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
