Site icon BosstvKannada

ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬಕ್ಕೆ ಭರ್ಜರಿ ತಯಾರಿ.. ಹೂವು-ಹಣ್ಣು ಖರೀದಿಗೆ ಮುಗಿಬಿದ್ದ ಜನ

ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಡಗರ ಮನೆ ಮಾಡಿದೆ. ಹಬ್ಬಕ್ಕೆ ಬೇಕಾದ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಜನರು ಉತ್ಸಾಹದಿಂದ ಖರೀದಿಯಲ್ಲಿ ತೊಡಗಿದ್ದಾರೆ. ಹೂವು, ಹಣ್ಣು, ತರಕಾರಿ, ಬಾಳೆಕಂದು, ಮಾವಿನ ಸೊಪ್ಪು ಮತ್ತು ಪೂಜಾ ಸಾಮಗ್ರಿಗಳ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ.

ಪ್ರತಿ ವರ್ಷದಂತೆ ಈ ಬಾರಿಯೂ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ದೆ ಹಾಗೂ ಸಂಭ್ರಮದಿಂದ ಆಚರಿಸಲು ಜನರು ಸಿದ್ಧತೆ ನಡೆಸಿದ್ದಾರೆ. ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಆದರೂ, ಜನರು ಹಬ್ಬದ ಖರೀದಿಗಾಗಿ ಮುಗಿಬಿದ್ದಿದ್ದಾರೆ.

ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಮಲ್ಲಿಗೆ, ಕನಕಾಂಬರ, ಗುಲಾಬಿ ಮತ್ತು ಸೇವಂತಿಗೆ ಹೂವುಗಳಿಗೆ ಬೇಡಿಕೆ ಹೆಚ್ಚಿದ್ದು, ಬೆಲೆಗಳು ಎರಡು ಪಟ್ಟು ಹೆಚ್ಚಾಗಿವೆ. ಸೇಬು, ಬಾಳೆಹಣ್ಣು, ದಾಳಿಂಬೆ ಮತ್ತು ಇತರೆ ಹಣ್ಣುಗಳ ಬೆಲೆಯೂ ಹೆಚ್ಚಳವಾಗಿದೆ. ಹಬ್ಬಕ್ಕೆ ಹೆಚ್ಚಾಗಿ ಬಳಸುವ ತರಕಾರಿಗಳಾದ ಬದನೆಕಾಯಿ, ಬೆಂಡೆಕಾಯಿ, ಹಾಗಲಕಾಯಿ ಮತ್ತು ಸೌತೆಕಾಯಿ ಬೆಲೆಗಳು ಏರಿಕೆಯಾಗಿದ್ದು, ಇತರೆ ಪೂಜಾ ಸಾಮಗ್ರಿಗಳಿಗೂ ಹೆಚ್ಚಿನ ಬೇಡಿಕೆ ಇದೆ.

Exit mobile version