ಪತ್ರಿಕಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ವಾರ್ತಾಸೌಧದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನ ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಈ ಮೂಲಕ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಂತಾಗಿದೆ. ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಗೆ ಇಂದು ಚಾಲನೆ ನೀಡಿದರು.
ಬಳಿಕ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಿದರು. ಬಳಿಕ ಪತ್ರಕರ್ತರಿಗೆ ಮೋ- ಜೋ ಕಿಟ್ ವಿತರಿಸಿದರು. ತದನಂತರ ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಮುಖ್ಯ.. ಮಾದ್ಯಮಗಳು ಸ್ವತಂತ್ರವಾಗಿರಬೇಕು. ಸುಳ್ಳು ಸುದ್ದಿ, ದ್ವೇಷದ ಭಾಷಣ ತಡೆಗೆ ಕಾನೂನು ತರ್ತೀವಿ. ಸುಳ್ಳು ಸುದ್ದಿ ಹರಡುವುದು ಬೇಡ. ತನಿಖೆ ಮಾಡಿ ಸುದ್ದಿ ಮಾಡಿ. ಊಹೆ ರಾಜಕೀಯ ಜಾಸ್ತಿಯಾಗ್ತಿದೆ ಎಂದು ಹೇಳಿದರು.

